
ಸಕಲೇಶಪುರ :- ಹೆತ್ತೂರು ಹೋಬಳಿಯ ಪ್ರತಾಪ್ ಗೌಡ ಬಾಚಿಹಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರನ್ನು ಸೇರ್ಪಡೆ ಮಾಡಿಸುವ ಕೆಲಸವು ಚುರುಕಾಗಿದ್ದು , ಶನಿವಾರ 500ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸುವ ಕೆಲಸವನ್ನು ಮಾಡಿದ್ದಾರೆ.
ಸಮಾಜ ಸೇವಕರಾಗಿದ್ದ ಬಾಚಿಹಳ್ಳಿ ಪ್ರತಾಪ್ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ತಮ್ಮ ಹೋಬಳಿಯ ಸುತ್ತಮುತ್ತ ಇರುವ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಕೆಲಸವನ್ನು ಪ್ರತಿನಿತ್ಯ ಮಾಡುತ್ತಿದ್ದು. ಇದರಿಂದ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯಲ್ಲಿ ಈಚಿನ ದಿನಗಳಲ್ಲಿ ಅತಿ ಹೆಚ್ಚು ಕಾರ್ಯಕರ್ತರು ಬೇರೆ ಪಕ್ಷ ತೊರೆದು ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ.
ಈ ನಿಟ್ಟಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸದೃಢ ಮಾಡುವ ಕೆಲಸವನ್ನು ಕಾಂಗ್ರೆಸ್ ಮುಖಂಡರಾದ ಬಾಚಿಹಳ್ಳಿ ಪ್ರತಾಪ್ ಗೌಡ ರವರು ಮಾಡುತ್ತಿದ್ದಾರೆ.
ಇದರ ಮುಂದುವರೆದ ಭಾಗವೆಂಬುವಂತೆ ಶನಿವಾರದಂದು ವನಗೂರು ಎಸ್ಟೇಟ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೂತನವಾಗಿ ಕಾರ್ಯಕರ್ತರನ್ನು ಸೇರ್ಪಡೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಹಾಗೂ ಪ್ರತಾಪ್ ಗೌಡರ ಅಭಿಮಾನಕ್ಕಾಗಿ ಹಾಗೂ ಅವರು ಮಾಡಿರುವ ಸಮಾಜ ಸೇವೆಗಾಗಿ ಹೆತ್ತೂರು, ರಾಗಿಪುರ,ಅತ್ತಿಹಳ್ಳಿ,ಹಂಡಳ್ಳಿ,ಬಿಸ್ಲೆ, ಕೊಂಥನಮನೆ,ವನಗೂರು ಎಸ್ಟೇಟ್, ಹೊಂಗಡ ಹಳ್ಳ,ಗ್ರಾಮದಿಂದ 500ಕ್ಕಿಂತ ಹೆಚ್ಚು ಕಾರ್ಯಕರ್ತರು ಬೇರೆ ಪಕ್ಷಗಳನ್ನು ತೊರೆದು ಬಾಚಿಹಳ್ಳಿ ಪ್ರತಾಪ್ ಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತಾಲೂಕಿನ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುರುಳಿ ಮೋಹನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೊದ್ದು ಲೋಕೇಶ್, ಎಸ್ಸಿ, ಎಸ್ಟಿ ಅಧ್ಯಕ್ಷರಾದ ಪ್ರಶಾಂತ್,ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಕೆ.ಪಿ ಕೃಷ್ಣೇಗೌಡ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಬ್ಯಾಕರವಳ್ಳಿ ವಿಜಿಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಜರಿದ್ದರು.












