ಉಡುಪಿ: ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕರಾವಳಿ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದ್ದು, ಘಟನೆ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ.

ಕೊಲೆಯಾದವರನ್ನು ತಾಯಿ ಹಸೀನಾ, ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ.

ಇದಲ್ಲದೆ ಚೂರಿ ಇರಿತದಿಂದ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ. ಶಂಕಿತ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.

ಈಗಾಗಲೇ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಡಿವೈಎಸ್ಪಿ ದಿನಕರ ಅವರು ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲಿಸುತ್ತಿದ್ದಾರೆ.

VB ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಕೊಲೆ ಕೃತ್ಯವು ಕಳ್ಳತನದ ಉದ್ದೇಶದಿಂದ ನಡೆದಂತೆ ಕಾಣುತ್ತಿಲ್ಲ. ಮನೆಯಿಂದ ಚಿನ್ನಾಭರಣ ಕಳವಾಗಿಲ್ಲ ಎಂದು ತಿಳಿಸಿದ್ದಾರೆ.

ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್, ಅಯ್ನಾಝ್ ಮತ್ತು ಅಸೀಮ್ ಎಂಬವರನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ.

ಹಸೀನಾರ ಅತ್ತೆ ಕೂಡಾ ದುಷ್ಕರ್ಮಿಯಿಂದ ಇರಿತಕ್ಕೊಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *