ಹೊಳೇನರಸೀಪುರ: ಪಟ್ಟಣದ ಪೇಟೆ ಮುಖ್ಯ ರಸ್ತೆಯಲ್ಲಿ ವಿನಾಕಾರಣ ದ್ವಿಚಕ್ರ ವಾಹನದಲ್ಲಿ ಸುತ್ತುತ್ತ ಕಿರಿಕಿರಿ ಉಂಟು ಮಾಡುತ್ತಿದ್ದ ಯುವಕರಿಗೆ ಶುಕ್ರವಾರ ನಗರ ಪೊಲೀಸ್ ಠಾಣೆ ಪಿಎಸ್‌ಐ ಅರುಣ್ ಬಿಸಿ ಮುಟ್ಟಿಸಿದ್ದಾರೆ.

ಪಟ್ಟಣದ ಪೇಟೆ ಮುಖ್ಯ ರಸ್ತೆಯ ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಮನೆಗೆ ತೆರಳುವ ವಿದ್ಯಾರ್ಥಿನಿಯರು, ವರ್ತಕರು ಇಂತಹ ಯುವಕರಿಂದ ರೋಸಿ ಹೋಗಿದ್ದರು.

ಶುಕ್ರವಾರ ಕಾಲೇಜು ಬಿಡುತ್ತಿದ್ದಂತೆ ಬಸವನಗುಡಿ ರಸ್ತೆಯಲ್ಲಿ ಜೀಪನ್ನು ನಿಲ್ಲಿಸಿದ ಅರುಣ್‌, ವಿನಾಕಾರಣ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ನಿಲ್ಲಿಸಿ, ಬಿಸಿ ಮುಟ್ಟಿಸಿದರು. ‌ಹೆಲ್ಮೆಟ್‌, ವಾಹನ ಚಾಲನಾ ಪರವಾನಗಿ, ವಿಮೆ ಹಾಗೂ ವಾಹನ ದಾಖಲಾತಿ ಪರಿಶೀಲನೆ ನಡೆಸಿದರು.

45 ವಾಹನಗಳ ಚಾಲಕರಿಗೆ ದಂಡ ವಿಧಿಸಿದ್ದಾರೆ. ಇದೇ ರೀತಿಯ ಪುನರಾವರ್ತನೆ ಆದಲ್ಲಿ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಎಚ್ಚರಿಸಿದರು. ಪೊಲೀಸರ ಕಾರ್ಯಾಚರಣೆಯ ಬಗ್ಗೆ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಯುವಕರಿಗೆ ಕೆಲವು ಯುವತಿಯರು ಮಾಹಿತಿ ನೀಡುತ್ತಿದ್ದ ದೃಶ್ಯ ಕಂಡು ಬಂದಿತು.

ನಗರ ಪೊಲೀಸ್ ಠಾಣೆ ಸಿಬ್ಬಂದಿ ಪ್ರವೀಣ್ ಹಾಗೂ ನಾಗಪ್ಪ ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *