
ಹಾಸನ: ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಪಾಲ್ಗೊಂಡು, ಶಾಸನ ಸಭೆಗಳ ಕಾರ್ಯ-ಕಲಾಪಗಳ ಬಗ್ಗೆ ಅರಿವು ಪಡೆದುಕೊಂಡರು.
ಶಿಕ್ಷಣ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಶಾಸನ ರಚನಾ ಸಚಿವಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಈಗಾಗಲೇ ವಲಯವಾರು ಮಟ್ಟದಲ್ಲಿ ವಿಜೇತರಾಗಿದ್ದವರು ಭಾಗವಹಿಸಿದ್ದರು.
ತಂಡದಲ್ಲಿದ್ದ ವಿದ್ಯಾರ್ಥಿಗಳು ಆಡಳಿತ ಹಾಗೂ ವಿರೋಧ ಪಕ್ಷಗಳ ಅಣಕು ಪಾತ್ರ ನಿರ್ವಹಿಸಿ ಗಮನ ಸೆಳೆದರು.ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ನಾಡಿನ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಜೊತೆಗೆ ಸಮಸ್ಯೆ, ಪ್ರಸ್ತುತ ವಿದ್ಯಮಾನಗಳ ಬಗ್ಗೆ ತಿಳಿಯಲು ಮಕ್ಕಳ ಸಂಸತ್ ಬಹಳ ಪ್ರಯೋಜನಕಾರಿ ಎಂದರು.
ವಾದ-ವಿವಾದಗಳು ಸಾಮಾಜಿಕ ಬೆಳವಣಿಗೆಯ ಪರವಾಗಿರಬೇಕು. ಮಕ್ಕಳ ಮುಂದಿನ ಭವಿಷ್ಯಕ್ಕೆ ಈ ಸ್ಪರ್ಧೆಗಳು ದಾರಿದೀಪವಾಗಬೇಕು. ಜನ ಪ್ರತಿನಿಧಿಗಳನ್ನು ಸಿದ್ಧಗೊಳಿಸಲು ಯುವ ಸಂಸತ್ ಕಾರ್ಯಕ್ರಮ ಪ್ರೇರಣೆಯಾಗಬೇಕು ಎಂದು ಅವರು ಆಶಿಸಿದರು.
ಸರ್ಕಾರ ಮತ್ತು ಸಂಸದೀಯ ವ್ಯವಸ್ಥೆಯ ಬಗ್ಗೆ ಚರ್ಚೆ ಮನವರಿಕೆ ಮಾಡಿಕೊಡಲು ಸಹಕಾರಿಯಾಗಿದೆ ಮಕ್ಕಳಲ್ಲಿನ ಸುಪ್ರಪ್ರತಿಭೆ ಅನಾವರಣ ಮತ್ತವರ ಶಿಕ್ಷಣ ಆಲೋಚನೆಗಳನ್ನು ಮುಕ್ತವಾಗಿ ಚರ್ಚಿಸಲು ಕಾರ್ಯಕ್ರಮ ಅನುಕೂಲವಾಗಿದೆಇದರ ಸದುಪಯೋಗವನ್ನು ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳು ವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಿ. ಓ ಬಲರಾಮ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು



