
ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24 ರ ಅಂಗವಾಗಿ ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ *ಮೀನು ಸಾಕಾಣಿಕೆ* ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಇತ್ತೀಚಿನ ದಿನಗಳಲ್ಲಿ ಮೀನು ಸಾಕಾಣಿಕೆಯು ಪ್ರಮುಖ ಸಣ್ಣ ಉದ್ಯಮವಾಗಿದ್ದು ರೈತರಿಗೆ ಆದಾಯ ತರುವಲ್ಲಿ ಯಶಸ್ವಿಯಾಗಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ತರುವಂತಹ ಈ ಸಣ್ಣ ಉದ್ಯಮದ ಕುರಿತ ಮಾಹಿತಿಯನ್ನು ಕುಡುಕುಂದಿ ಗ್ರಾಮಸ್ಥರಿಗೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾದ ಅರಸೀಕೆರೆಯ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಎಮ್ ರವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ರೈತರನ್ನು ಕುರಿತು ಮಾತನಾಡಿದ ಅವರು ಮೀನುಗಾರಿಕೆಗೆ ಸೂಕ್ತವಾದ ಮೀನಿನ ಜಾತಿಗಳು, ಅವುಗಳನ್ನು ಸಾಕುವ ವಿಧಾನ, ಸಂಬಂಧಿಸಿದ ಸರ್ಕಾರದ ಯೋಜನೆಗಳು ಹೀಗೆ ಹಲವಾರು ಮಾಹಿತಿಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಮಾರೇಗೌಡ, ದೇವರಾಜು,ಕಾಳೆಗೌಡ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು.
