ಹಾಸನ: ಪದವಿಪೂರ್ವ ಶಿಕ್ಷಣ ಇಲಾಖೆಯ ಅಸ್ಥಿತ್ವ ಉಳಿಸಲು ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ, ಉಪನ್ಯಾಸಕರ ಹಾಗೂ ಬೋಧಕೇತರ ಸಿಬ್ಬಂದಿಗಳ ನೌಕರರ ಒಕ್ಕೂಟ ಜಿಲ್ಲಾ ಘಟಕದಿಂದ ಒಂದು ದಿನದ ಶಾಂತಿಯುತ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಶಾಂತಾಲ ಅವರಿಗೆ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಅವರು, ಪದವಿ ಪೂರ್ವ ಇಲಾಖೆಯನ್ನು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಎಂದು ಹೆಸರು ಬದಲಾಯಿಸಲಾಗಿದೆ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ ಪಿಯು ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ಹಿಂದಿನಿಂದಲೂ ನಡೆಯುತ್ತಿದೆ.

ಇದನ್ನು ಕೂಡಲೇ ಕೈಬಿಟ್ಟು ಪದವಿಪೂರ್ವ ಶಿಕ್ಷಣ ಇಲಾಖೆ ಎಂಬ ಹೆಸರನ್ನೆ ಹಿಂದಿನಂತೆ ಯಥಾ ಸ್ಥಿತಿಯಲ್ಲ ಇರಿಸಬೇಕು. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಳಿಸುವಂತೆ ಒತ್ತಾಯಿಸಿದರು.

ಜಿಲ್ಲಾ ಹಂತಗಳಲ್ಲಿ ಪ.ಪೂ ಶಿ ಇಲಾಖೆಯ ಮೇಲುಸ್ತುವಾರಿ ಯನ್ನುಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರಿಗೆ ವಹಿಸಲು ಸರ್ಕಾರ ಆದೇಶ ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದರು.

ಪರೀಕ್ಷೆ ಪದ್ಧತಿ ಬದಲಾಯಿಸುವ ಮುನ್ನ ತಜ್ಞರ ಸಮಿತಿ ರಚಿಸಿ ಸಲಹೆ ಪಡೆಯಬೇಕು ಆದರೆ ಇದ್ಯಾವುದನ್ನು ಮಾಡದೆ ಪಿಯು ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವುದು ಅವೈಜ್ಞಾನಿಕವಾಗಿದೆ ಎಂದರು.

ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಕುಸಿಯುವ ಸಾಧ್ಯತೆ ಹೆಚ್ಚು ಎಂದರು. ಅಲ್ಲದೆ ಉಪನ್ಯಾಸಕರು ಶೈಕ್ಷಣಿಕ ವರ್ಷಾರಂಭದ ಕೆಲ ತಿಂಗಳು ನೂತನ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಪದವಿ ಪೂರ್ವ ಶಿಕ್ಷಣ ಇಲಾಖೆ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ವಿಲೀನ: ವಿರೋಧ ಮಾಡುವುದನ್ನು ಬಿಟ್ಟು ಹಳೆ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಮೌಲ್ಯಮಾಪನದಲ್ಲಿ ತೊಡಗಬೇಕಾಗುತ್ತದೆ. ಜೊತೆಗೆ ಸಂಪೂರ್ಣ ಬೇಸಿಗೆ ರಜೆಯನ್ನು ಉಪನ್ಯಾಸಕರು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಪ.ಪೂ.ಶಿ.ಇಲಾಖೆಯನ್ನು ರಜೆ ರಹಿತ ಇಲಾಖೆಯನ್ನಾಗಿ ಘೋಷಿಸುವಂತೆ ಒತ್ತಾಯಿಸಿದರು.

ಇಂದು ಸಾಂಕೇತಿಕವಾಗಿ ಮನವಿ ನೀಡಲಾಗುತ್ತಿದೆ. ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಡಿ. ೧ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು, ಇದಕ್ಕೂ ಸ್ಪಂದಿಸದಿದ್ದರೇ ವಿದ್ಯಾರ್ಥಿಗಳ ಪರೀಕ್ಷಾ ನಂತರ ವ್ಯಾಲುವೇಷನ್ ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡದರು.

ಇದೆ ವೇಳೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋದಕೇತ್ತರ ಸಂಘಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ದೇವರಾಜು, ರಾಜ್ಯ ಉಪನ್ಯಾಸಕರ ಸಂಘದ ಅಧ್ಯಕ್ಷ ಕೆ.ಟಿ., ಸುರೇಶ್, ದೀಪಕ್ ಎಚ್.ಎಸ್. ಹಾಸನ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸುರೇಂದ್ರಕುಮಾರ್, ಕಾರ್ಯದರ್ಶಿ ಟಿ.ಎ. ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *