ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತೆಯ ಬಗ್ಗೆ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಅದರಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ತಂತ್ರಾಂಶವನ್ನು ಸಿದ್ಧಪಡಿಸಲಾಗಿದ್ದು ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ಕನಿಷ್ಠ 21 ರಿಂದ ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-11-2023. ಹೆಚ್ಚಿನ ಮಾಹಿತಿಗಾಗಿ ಇಲಾಖಾ ನೌಕರರಾದ ನಾರಾಯಣ್ ಎ.ಬಿ. ಇವರ ಮೊಬೈಲ್ ಸಂಖ್ಯೆ: 9483822522 ಸಂಪರ್ಕಿಸಲು ಸಹಾಯಕ ನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆ, ಸಕಲೇಶಪುರ ರವರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

ಪ್ರಕಟಣೆ ಹಾಗೂ ತರಬೇತಿಯ ವಿವರದ ದಾಖಲಾತಿಯನ್ನು ಲಗತ್ತಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *