
ಬೆಂಗಳೂರಿನ ಶಿವಾಜಿನಗರದಲ್ಲಿ ನರ್ಸರಿ ಶಾಲೆ ಕಟ್ಟಡವೊಂದು ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ.
ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ. ಬೆಂಗಳೂರು, (ನವೆಂಬರ್ 27): ಬೆಂಗಳೂರಿನ ಶಿವಾಜಿನಗರದಲ್ಲಿ ನರ್ಸರಿ ಶಾಲೆ ಕಟ್ಟಡವೊಂದು ಕುಸಿದುಬಿದ್ದಿದೆ.
ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ. ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.
ಸ್ಥಳೀಯ ನಿವಾಸಿಗಳು ಹೇಳುವ ಪ್ರಕಾರ, ಈ ನರ್ಸರಿ ಶಾಲೆಯಲ್ಲಿ ಸುಮಾರು 80 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ. ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
