
ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 48ರ ಹೆದ್ದಾರಿ ಕಾಮಗಾರಿಯನ್ನು ಕಳಪೆ ಮಟ್ಟದಲ್ಲಿ ಹಾಗೂ ಕಾರ್ಮಿಕರಿಗೆ ಯಾವುದೇ ರೀತಿಯ ಸುರಕ್ಷಾ ಸಾಧನಗಳನ್ನು ನೀಡದೆ ಕಾರ್ಮಿಕರ ಜೀವದ ಜೊತೆ ಚೆಲ್ಲಾಟ ಆಡುತ್ತಿರುವ ಗುತ್ತಿಗೆದಾರರನ್ನು ಜಿಲ್ಲಾಧಿಕಾರಿಗಳು ತಕ್ಷಣ ಪರವಾನಿಗೆಯನ್ನು ಹಿಂಪಡೆದು ಕಾರ್ಮಿಕರ ಜೀವದ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಲ್ಲದಿದ್ದರೆ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡುತ್ತೇವೆ ಎಂದು ಜಿಲಾಧ್ಯಕ್ಷರಾದ ಜೀವನ್ ಗೌಡ ಹಾಗು ತಾಲ್ಲೂಕು ಅಧ್ಯಕ್ಷರಾದ ವಿಜಯ್ ಕುಮಾರ್ ಎಚ್ಚರಿಕೆಯ ಸಂದೇಶವನ್ನು ನೀಡಿದರು
