ಚನ್ನರಾಯಪಟ್ಟಣ : ತಾಲೂಕಿನ ನುಗ್ಗೆಹಳ್ಳಿ ಹೋಬಳಿಯ ಮಾದಿಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ನುಗ್ಗೆಹಳ್ಳಿ ಶಾಖ ಮಠದ ಶ್ರೀ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ವಹಿಸಿದರು,

ಶಾಸಕರಾದ ಸಿ ಎನ್ ಬಾಲಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಸಿಎನ್ ಬಾಲಕೃಷ್ಣ ಅವರು ಪ್ರತಿ ಗ್ರಾಮದಲ್ಲಿ ಗ್ರಾಮ ದೇವತೆಯ ದೇವಸ್ಥಾನ ಹಾಗೂ ಪ್ರತಿ ಗ್ರಾಮದ ದೇವಸ್ಥಾನಗಳನ್ನು ಜೀರ್ಣದಾರಗೊಳಿಸುವುದು ಪ್ರತಿಯೊಬ್ಬ ಗ್ರಾಮಸ್ಥರ ಕರ್ತವ್ಯವಾಗಿದೆ, ಈ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಆಗಿರುವುದು ಗ್ರಾಮದ ಸಮಸ್ತರಿಗೂ ಸಂತೋಷವನ್ನು ಉಂಟು ಮಾಡಿದೆ, ಹಲವಾರು ವರ್ಷಗಳಿಂದ ಈ ಗ್ರಾಮದ ಆಂಜನೇಯ ದೇವಾಲಯವು ಶೀತಲೀಕರಣಗೊಂಡು ದೇವಾಲಯಕ್ಕೆ ಹೋಗುವ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಇದನ್ನು ಮನಗೊಂಡ ಮಾದಿಹಳ್ಳಿ ಗ್ರಾಮಸ್ಥರು ಎಲ್ಲರೂ ಒಗ್ಗೂಡಿ ದೇವಸ್ಥಾನವನ್ನು ಪೂರ್ಣಗೊಳಿಸಬೇಕು ಎಂಬ ಆಲೋಚನೆಯಿಂದ ತಾಲೂಕಿನ ಹಲವಾರು ದಾನಿಗಳ ಸಹಕಾರದಿಂದ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆದು ದೇವಸ್ಥಾನವನ್ನು ಜೀರ್ಣೋದ್ಧಾರ ಗೊಳಿಸಿರುವುದು ತುಂಬಾ ಸಂತೋಷದ ವಿಚಾರವಾಗಿದೆ ಎಂದು ದೇವಸ್ಥಾನ ಅಭಿವೃದ್ಧಿಯ ಸಮಿತಿಯ ಸರ್ವ ಸದಸ್ಯರನ್ನು ಸ್ಮರಿಸಿಕೊಂಡು ಗ್ರಾಮದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಸಿ ಎಸ್ ಪುಟ್ಟೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಅಣತಿ ಆನಂದ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್ ಕೆ ಮಂಜೇಗೌಡ,ಜೆಡಿಎಸ್ ಮುಖಂಡರಾದ ಕಗ್ಗೆರೆ ನಾಗೇಂದ್ರಬಾಬು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗಂಗಾಧರ್, ಮಟ್ಟನವಿಲೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರಾಜಪುರಮನು, ಗ್ರಾಮ ಪಂಚಾಯತಿ ಸದಸ್ಯರಾದ ಮಾದಿಹಳ್ಳಿವೆಂಕಟೇಶ್, ಸೊಸೈಟಿ ಮಾಜಿ ಸದಸ್ಯರಾದ ಮಾದಿಹಳ್ಳಿ ರವಿ, ಅರ್ಚಕರಾದ ನರಸಿಂಹಮೂರ್ತಿ ಮತ್ತು ಕುಟುಂಬದವರು ಮಾದಿಹಳ್ಳಿ, ಪ್ರಥಮ ದರ್ಜೆ ಗುತ್ತಿಗೆದಾರಾದ ಗಿರೀಶ್, ನೀಲಗಿರಿ ವಾಸಿ ಪುಟ್ಟಸ್ವಾಮಿಗೌಡ ಮತ್ತು ದಿವಂಗತ ಪಾಪಣ್ಣನವರ ವಂಶಸ್ಥರು ಸೇರಿದಂತೆ ಮಾದಿಹಳ್ಳಿ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದ ಭಕ್ತಾದಿಗಳು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed