ಚನ್ನರಾಯಪಟ್ಟಣ: ಭಕ್ತ ಕನಕದಾಸರ 536ನೇ ಜನ್ಮ ದಿನೋತ್ಸವವನ್ನು ಆಚರಿಸಲಾಯಿತು. ಚನ್ನರಾಯಪಟ್ಟಣ ತಾಲೂಕು ಆಡಳಿತ ಮತ್ತು ತಾಲೂಕು ಕುರುಬರ ಸಂಘದ ಸಂಯುಕ್ತ ಆಶ್ರಯದಲ್ಲಿ ಭಕ್ತ ಕನಕದಾಸರ 536ನೇ ಜನ್ಮದಿನೋತ್ಸವವನ್ನು ತಾಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಲಾಯಿತು,
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಿಎನ್ ಬಾಲಕೃಷ್ಣ ವಹಿಸಿ ಮಾತನಾಡಿ ಪ್ರತಿಯೊಬ್ಬರು ದಾಸ ಶ್ರೇಷ್ಠ ಕನಕದಾಸರ ತತ್ವ ಸಿದ್ಧಾಂತಗಳನ್ನು ತಿಳಿದುಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದರು.
ಕುರುಬ ಸಮಾಜದ ಸಮುದಾಯ ಭವನವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶಂಕುಸ್ಥಾಪನೆಯನ್ನು ಮಾಡಿದ್ದು, ನೂತನ ಕಟ್ಟಡದ ಉದ್ಘಾಟನೆಯನ್ನು ಸಹ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಅಮೃತ ಹಸ್ತದಲ್ಲಿ ಲೋಕರ್ಪಣೆ ಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕನಕ ಸಮುದಾಯ ಭವನದ ಉಳಿಕೆ ಕಾಮಗಾರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭೇಟಿ ಮಾಡಿ ಹೆಚ್ಚುವರಿ ಅನುದಾನವನ್ನು ಕೊಡುವಂತೆ ಮನವಿ ಮಾಡಲಾಗುವುದು.
ನಮ್ಮ ಚನ್ನರಾಯಪಟ್ಟಣ ತಾಲೂಕಿನ ಕುರುಬ ಸಮಾಜದ ಮುಖಂಡರುಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅತಿ ಶೀಘ್ರದಲ್ಲಿ ಕನಕ ಸಮುದಾಯವನ್ನು ಲೋಕಾರ್ಪಣೆಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.
ಚನ್ನರಾಯಪಟ್ಟಣ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಕನಕದಾಸರ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು ಹಾಗೂ ಕನಕದಾಸರ ಕುರಿತು ವಿಚಾರ ಸಂಕೀರ್ಣಗಳನ್ನು ಏರ್ಪಡಿಸಿ ಆ ಕಾರ್ಯಕ್ರಮದಲ್ಲಿ ಲೋಕೇಶ್ ದಾಸ್ ಅವರಿಂದ ಕನಕದಾಸರ ಇತಿಹಾಸವನ್ನು ತಿಳಿಸುವ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಭಾಷಣಗಾರರಾಗಿ ಆಗಮಿಸಿದ ದಾಸರ ಪರಂಪರೆಯ ವಿದ್ವಾಂಸರಾದ ಲೋಕೇಶ್ ದಾಸ್ ಅವರು ಪ್ರವಚನವನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಸಿ ಎನ್ ಬಾಲಕೃಷ್ಣ, ತಾಲೂಕು ದಂಡಾಧಿಕಾರಿ ಬಿಎಮ್ ಗೋವಿಂದರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ ಆರ್ ಹರೀಶ್, ಡಿ ವೈ ಎಸ್ ಪಿ ರವಿಪ್ರಸಾದ್, ಪುರಸಭೆಯ ಮುಖ್ಯ ಅಧಿಕಾರಿ ಹೇಮಂತ್, ಅಕ್ಷರ ದಾಸೋಹದ ಸಂಯೋಜಕರಾದ ಚೆಲುವನಾರಾಯಣ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಚ್ ಎಲ್ ಲೋಕೇಶ್, ಕುರುಬರ ಸಂಘದ ಗೌರವಾಧ್ಯಕ್ಷರಾದ ಎಂ ಕೆ ಮಂಜೇಗೌಡ, ತಾಲೂಕು ಅಧ್ಯಕ್ಷರಾದ ಕಬ್ಬಾಳ್ ರಮೇಶ್, ನಾಡಪ್ರಭು ಕೆಂಪೇಗೌಡ ವೇದಿಕೆಯ ಅಧ್ಯಕ್ಷರಾದ ಆನಂದ್ ಕಾಳೆನಹಳ್ಳಿ, ಕುರುಬ ಸಮಾಜದ ಮುಖಂಡರಾದ ಕೆ ಎಲ್ ಸುರೇಶ್, ಹೊನ್ನೇನಹಳ್ಳಿಶಂಕರಲಿಂಗೇಗೌಡ, ಮಡಬಶಂಕರಲಿಂಗೇಗೌಡ, ಎಂ ಹೊನ್ನೇನಹಳ್ಳಿ ಜಗದೀಶ್, ಅಣ್ಣಪ್ಪ ಉತ್ತೇನಹಳ್ಳಿ ಚಂದ್ರು ಕಬ್ಬಾಳ ಮಹೇಶ್, ಸೇರಿದಂತೆ ಇತರರು ಹಾಜರಿದ್ದರು.