
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ರಾಜಸ್ಥಾನದಲ್ಲಿ ಒಟ್ಟು 200 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇದಲ್ಲಿ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು 101 ಬಹುಮತ ಬೇಕಾಗಿದೆ.
ಆದರೆ ಈಗಾಗಲೇ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದ್ದು, ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 83 ಸ್ಥಾನಗಳಲ್ಲಿ ಪಡೆದು ಸರಿಯಾಗಿ ಪೈಪೋಟಿ ನಡೆಸುತ್ತಿದ್ದಾರೆ.
ಇತರೆ 04 ಸ್ಥಾನ ಪಡೆದಿದ್ದು, ಪ್ರಸ್ತುತ, ಟ್ರೆಂಡ್‌ಗಳು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆಯನ್ನು ತೋರಿಸುತ್ತವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಬಹುಮತದ ಸ್ಪಷ್ಟ ಚಿತ್ರಣಕ್ಕೆ ಕಾದು ನೋಡಬೇಕಾಗಿದೆ.
ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾವ ಪಕ್ಷದ ತೆಕ್ಕೆಗೆ ಬೀಳಲಿದೆ ಎಂಬುದು ಸ್ಫಷ್ಟವಾಗಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ.
