
ಚನ್ನರಾಯಪಟ್ಟಣ: 2023 ಆಗಸ್ಟ್ ತಿಂಗಳು ಅಮೃತಸರ ನಲ್ಲಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಸಂಸ್ಥೆಯವರು ಆನ್ ಲೈನ್ ಮೂಲಕ ನಡೆದ ಎಲ್ಲಾ ರೀತಿಯ ಸಾಂಸ್ಕೃತಿಕ ಉತ್ಸವದಲ್ಲಿ ವಿಶ್ವದಾದ್ಯಂತ 23 ಸಾವಿರ ಕಲಾವಿದರ ಸದಸ್ಯತ್ವವನ್ನು ಹೊಂದಿರುವ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯ ವತಿಯಿಂದ 930 ಕಲಾವಿದರು ಭಾಗವಹಿಸಿದ್ದಕ್ಕಾಗಿ
ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿಯ ಹೆಸರನ್ನು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಗೆ ಸೇರಿಕೊಂಡಿದ್ದು
ಈ ಪ್ರಮಾಣ ಪತ್ರವನ್ನು ಜೈನಕಾಶಿ ಎಂಬ ಬಿರುದು ಹೊಂದಿರುವ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಶ್ರೀ ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಅಕಾಡೆಮಿಯ ಆಯೋಜನ ಕಾರ್ಯದರ್ಶಿ ವಿದೂಷಿ. ಡಾ.ಸ್ವಾತಿ ಪಿ ಭಾರದ್ವಾಜ್ ರವರಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಮಾಣ ಪತ್ರವನ್ನು ನೀಡಿ ಸಾಧನೆಯನ್ನು ಶ್ಲಾಘಿಸಿ ಭಾರತೀಯ ಸಂಸ್ಕೃತಿಯಲ್ಲಿ ಒಂದಾದ ಶಾಸ್ತ್ರೀಯ ನೃತ್ಯಗಳನ್ನು ಉಳಿಸಿ ಬೆಳೆಸುವಂತಹ ನಿಟ್ಟಿನಲ್ಲಿ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯು ಇನ್ನು ಹೆಚ್ಚಿನ ಸೇವೆಯನ್ನು ಮಾಡಲಿ ಎಂದು ಆಶೀರ್ವದಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಯುವರಾಜ್ ಮತ್ತು ಸಮಾಜ ಸೇವಕರಾದ ರಮೇಶ್, ಎಂ ಕೆ ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.

