ಚಗಚಗೆರೆ: ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಕೃಷಿ ಹಾಗೂ ಜೈವಿಕ ತಂತ್ರಜ್ಞಾನದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023 – 24 ರ ಅಂಗವಾಗಿ ಅರಸೀಕೆರೆ ತಾಲ್ಲೂಕಿನ ಚಗಚಗೆರೆ ಗ್ರಾಮದಲ್ಲಿ ನ್ಯಾನೋ ಗೊಬ್ಬರಗಳ ಬಳಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು

ಹಾಗೂ ಪ್ರಚಲಿತ ವಿದ್ಯಮಾನದಲ್ಲಿ ನ್ಯಾನೋ ರಸಗೊಬ್ಬರದ ಬಗ್ಗೆ ರೈತರಲ್ಲಿ ತಿಳುವಳಿಕೆ ಮೂಡಿಸಿದರು.

ನ್ಯಾನೋ ರಸಗೊಬ್ಬರಗಳ (ನ್ಯಾನೋ ಯೂರಿಯಾ, ನ್ಯಾನೋ ಡಿ ಎ ಪಿ ) ಬಳಕೆಯಿಂದ ಹೆಚ್ಚಿನ ಇಳುವರಿ ಮತ್ತು ಅದರ ಜನಪ್ರಿಯತೆಯನ್ನು ಸವಿಸ್ತಾರವಾಗಿ ರೈತರಿಗೆ ಮನವಿ ಮಾಡಿಕೊಟ್ಟು ಕೃಷಿ ಆದಾಯ ಹೆಚ್ಚಿಸಿಕೊಳ್ಳುವಲ್ಲಿ ಈ ತರಹದ ತಂತ್ರಜ್ಞಾನ ಬಹುಮುಖ್ಯ ಪಾತ್ರ ವಹಿಸಿದೆ ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮಕ್ಕೆ ಮಾಹಿತಿಯನ್ನು ನೀಡಲು ಸಂಪನ್ಮೂಲ ವ್ಯಕ್ತಿಗಳಾಗಿ ಸಹಾಯಕ ಪ್ರಾಧ್ಯಾಪಕರಾದ ಡಾ. ಅನಿತಾ ಎಂ.ಎಸ್ ಮಣ್ಣು ವಿಜ್ಞಾನ ವಿಭಾಗ ಇವರು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮಕ್ಕೆ ಸುಮಾರು 40 ಜನ ರೈತರು ಪಾಲ್ಗೊಂಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *