ಹಾಸನ ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಒಂಟಿ ಮಹಿಳೆಯರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರೆ ಬೈಕ್​ನಲ್ಲಿ ಬರುವ ಖದೀಮರು ಕತ್ತಿಗೆಗೆ ಕೈ ಹಾಕಿ ಸರ ಕಿತ್ತು ಕೊಂಡು ಪರಾರಿಯಾಗುತ್ತಿದ್ದಾರೆ. ಇಂದೇ ದಿನದಲ್ಲಿ ಈ ರೀತಿಯ ಮೂರು ಘಟನೆಗಳು ನಡೆದಿವೆ.

ಸರಗಳ್ಳತನ -1 ಹಾಸನದ ವಿಜಯನಗರ ಮೂರನೇ ಕ್ರಾಸ್‌ನಲ್ಲಿ ಹೂವು ತರಕಾರಿ ತೆಗೆದುಕೊಂಡು ವಾಪಾಸ್ ಮನೆಗೆ ತೆರಳುತ್ತಿದ್ದ ವೃದ್ದೆ ಪುಟ್ಟ ಲಕ್ಣ್ಮಮ್ಮ‌ ಅವರ ಸರಗಳ್ಳತನವಾಗಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಎರಡೂವರೆ ಲಕ್ಷ ರೂ. ಮೌಲ್ಯದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಗಳ್ಳತನ -2 ಮತ್ತೊಂದೆಡೆ ಗಣಪತಿ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುತ್ತಿದ್ದ ಒಡಿಸ್ಸಾ ಮೂಲದ ಮಾನಸಿ ಎಂಬಾಕೆಯ ಸರ ಎಗರಿಸಿ ಖದೀಮರು ಪರಾರಿಯಾಗಿದ್ದಾರೆ. ಬೈಕ್‌ನಲ್ಲಿ ಬಂದ ಸರಗಳ್ಳರು ಮಹಿಳೆಯ ಕೊರಳಿನಲ್ಲಿದ್ದ 15 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಗಳ್ಳತನ -3 ಹಾಸನ ತಾಲೂಕಿನ, ದುದ್ದ ಹೋಬಳಿ ಹೆರಗು ಗ್ರಾಮದ ಮಹಿಳೆ ಪದ್ಮ ಅವರು ಸಂಬಂಧಿಕರ ಮನೆಯಿಂದ ವಾಪಾಸ್ ಮನೆಗೆ ತೆರಳುತ್ತಿದ್ದರು. ಗೌರಿಕೊಪ್ಪಲಿನಲ್ಲಿ ಮಾಜಿ ಶಾಸಕ ಪ್ರೀತಂ ಜೆ.ಗೌಡ ಅವರ ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಸರಗಳ್ಳತನ ಮಾಡಿದ್ದಾರೆ. ಪದ್ಮ ಅವರ ಕೊರಳಿನಲ್ಲಿದ್ದ 33 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ.

ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬರುತ್ತಿರುವ ಖತರ್ನಾಕ್ ಕಳ್ಳರು, ಒಂಟಿ ಮಹಿಳೆಯರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಅಟ್ಯಾಕ್ ಮಾಡುತ್ತಿದ್ದಾರೆ. ಒಂದು ವಾರದ ಅಂತರದಲ್ಲಿ ಹಾಸನ ನಗರದ ವಿವಿದೆಡೆ ಏಳು ಪ್ರಕರಣಗಳು ದಾಖಲಾಗಿವೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *