ಬೆಂಗಳೂರು: ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ, ರೆಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ಸಂದರ್ಭದಲ್ಲಿ ಒಂಟಿ ಸಲಗದ ತಿವಿತದಿಂದ ಮೃತಪಟ್ಟ ಅರ್ಜುನನ ಅಕಾಲಿಕ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೈಕ್ರೊ ಬ್ಲಾಗಿಂಗ್ ಎಕ್ಸ್‌ನ ತಮ್ಮ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಅವರು, ‘ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಗೆ ಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ’ ಎಂದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *