
ಸಕಲೇಶಪುರ ತಾಲ್ಲೂಕಿನ ಯಸಳೂರು ಹೋಬಳಿಯ ಹೊರವಲಯದ ದಬ್ಬಳ್ಳಿ ಎಂಬ ಪ್ರದೇಶದಲ್ಲಿ ಕಾಡಾನೆ ಸೆರೆಹಿಡಿಯುವ ವೇಳೆ ವೀರ ಮರಣ ಹೊಂದಿದ ಅರ್ಜುನನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ ಅವರು ಶ್ರದ್ದಾಂಜಲಿ ಸಲ್ಲಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸತತವಾಗಿ 8 ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಆನೆ “ಅರ್ಜುನ” ಸಾವನ್ನಪ್ಪಿದ್ದು ದುಃಖಕರ ಸಂಗತಿಯಾಗಿದ್ದು ವೀರ ಮರಣ ಹೊಂದಿದ ಅರ್ಜುನನ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.
