ಆಲೂರು : ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಆರಕ್ಷಕ ವೃತ್ತ ನಿರೀಕ್ಷಕ ಗಂಗಾಧರ್ ಅವರು ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು ನಂತರ ಮಾಜಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ಮಾತಾನಾಡಿ ಈ ದಿನ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುಣ್ಯಸ್ಮರಣೆಯನ್ನು ಇಡೀ ರಾಷ್ಟ್ರಾದ್ಯಂತ ಆಚರಣೆ ಮಾಡುತ್ತಿದ್ದು ಭಾರತರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನಶಿಲ್ಪಿ ಮಾತ್ರವಲ್ಲದೇ, ನ್ಯಾಯ , ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ. ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.

ಅಂಬೇಡ್ಕರ್ ಅವರು ಇಲ್ಲದೇ ಇರುತ್ತಿದ್ದರೆ ದೇಶದಲ್ಲಿ ಇಂದಿಗೂ ಸಹಸ್ರಾರು ಮಂದಿ ನಿತ್ಯ ನರಕವನ್ನು ಅನುಭವಿಸುತ್ತಿದ್ದರು, ಹಾಗಾಗಿ ಸಂವಿಧಾನದಲ್ಲಿ ಏನು ತಮ್ಮ ಆಶಯಗಳನ್ನು ಅಳವಡಿಸಿಕೊಂಡಿದ್ದರು ಜಾತಿ ಪದ್ಧತಿ ನಿರ್ಮೂಲನೆ ಅಸ್ಪೃಶ್ಯತೆ ನಿರ್ಮೂಲನೆ ಸಮಾನತೆಯ ಹಕ್ಕು ಎಲ್ಲರೂ ಸಮಾನರೆಂದು ಭಾವಿಸಿದ್ದು ಅವರ ಆದರ್ಶ ಮಾರ್ಗದಂತೆ ನಾವು ಕೂಡ ಎಲ್ಲರನ್ನೂ ಪ್ರೀತಿ ವಿಶ್ವಾಸ ಸಮಾನತೆಯಿಂದ ಕಂಡು ಅವರ ಆದರ್ಶಗಳನ್ನು ಪಾಲಿಸಬೇಕಾಗಿದೆ ಎಂದರು

ತಾಲ್ಲೂಕು ತಹಸೀಲ್ದಾರ್ ನಂದಕುಮಾರ್ ಮಾತಾನಾಡಿ ಸಮಾನತೆಯ ಹರಿಕಾರರಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 67ನೇ ಪುರಿ ನಿರ್ವಾಣ ದಿನವನ್ನು ರಕ್ತದಾನ ಮಾಡುವ ಮೂಲಕ ಆಚರಿಸುತ್ತಿದ್ದು ಬಾಬಾ ಸಾಹೇಬರು ಅಸಮಾನತೆಯೇ ಮೇಳೈಸುತ್ತಿದ್ದ ಕಾಲದಲ್ಲಿ ತಾನು ಅನುಭವಿಸಿದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಸಿಗಬಾರದು ಅನ್ನುವ ದೃಷ್ಟಿಯಿಂದ ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡನೆ ಮಾಡಿದವರು.

ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದರು. ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಬಾಬಾ ಸಾಹೇಬರನ್ನು ಸ್ಮರಿಸಿ ವಂದಿಸೋಣಾ ಎಂದರು.

ಆರಕ್ಷಕ ವೃತ್ತ ನಿರೀಕ್ಷಕ ಗಂಗಾಧರ್ ಮಾತಾನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಪಾಲನೆ ಮಾಡುವ ಮೂಲಕ ಅವರ ಹೆಸರಿನಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿ ಅವರ ಹೆಸರನ್ನು ಉಳಿಸಬೇಕಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಮಹಾಭೋಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು,, ಈ ಕಾರ್ಯಕ್ರಮದಲ್ಲಿ ದಲಿತ ಪರ ಸಂಘಟನೆಗಳು ರಾಜಕೀಯ ಮುಖಂಡರುಗಳು ಆರಕ್ಷಕ ನಿರೀಕ್ಷಕರು ಹಾಗೂ ಸಾರ್ವಜನಿಕರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *