
ಚನ್ನರಾಯಪಟ್ಟಣ : ನಗರದ ಗಾಂಧಿ ಸರ್ಕಲ್ ನಲ್ಲಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ.ಶ್ರೀ ಶ್ರೀ ಸುಭುದೇoದ್ರ ತೀರ್ಥಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ನಿರ್ಮಾಣವಾಗಿರುವ ರಾಯರ ರಂಗ ಮಂದಿರದಲ್ಲಿ ಭಾರತೀಯ ಸಂಸ್ಕೃತಿ ಕಾರ್ತಿಕ ಮಾಸದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಯವರಿಗೆ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಚನ್ನರಾಯಪಟ್ಟಣದ ರಂಗಭೂಮಿ ಕಲಾವಿದ ಎ.ಜೆ .ರಾಜು ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ಗಾಂಧಿ ಸರ್ಕಲ್ ನಲ್ಲಿರುವ ರಾಯರ ರಂಗಮಂದಿರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಚನ್ನರಾಯಪಟ್ಟಣದ ತಾಲೂಕು ಪಂಚಾಯಿತಿಯ ಕಾರ್ಯನಿರ್ವಣಾಧಿಕಾರಿಗಳಾದ ಜಿ ಆರ್ ಹರೀಶ್ ಹಾಗೂ ಆನೆಕೆರೆ ಗ್ರಾಮ ಪಂಚಾಯಿತಿ ಗ್ರೇಡ್ – 2 ಕಾರ್ಯದರ್ಶಿಗಳಾದ ಶ್ರೀಮತಿ ಡಿ ಸವಿತ ಅವರು ಪೂಜೆಯಲ್ಲಿ ಭಾಗವಹಿಸಿದ್ದರು, ಇವರಿಗೂ ರಾಯರ ರಂಗಮಂದಿರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ನಂತರ ರಾಯರಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದವನ್ನು ಭಕ್ತಾದಿಗಳಿಗೆ ವಿನಿಯೋಗ ಮಾಡಲಾಯಿತು.
ಇದೇ ಸಂದರ್ಭದಲ್ಲಿ ರಾಯರ ರಂಗಮಂದಿರದ ಮುಖ್ಯಸ್ಥರಾದ ಪ್ರಕಾಶ್, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.




