
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಜಯಗಳಿಸಿದ್ದರೂ ಸಹ ಇನ್ನೂ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಕ್ಕಾಗಿ ಈ 3 ರಾಜ್ಯಗಳಿಗೆ ವೀಕ್ಷಕರನ್ನು ಶುಕ್ರವಾರ ನೇಮಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಬಿಜೆಪಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಜಯಗಳಿಸಿತ್ತು.
ಹೀಗಾಗಿ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಮುಂದುವರೆದಿದೆ.ಮೂರು ರಾಜ್ಯಗಳಲ್ಲೂ ಕೇಂದ್ರ ಸಚಿವರು, ಸಂಸದರು, ಹೊಸಬರು ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ.
ಹೀಗಾಗಿ ಬಿಜೆಪಿ ಈ ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಿದೆ. ಇವರು ರಾಜ್ಯದ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಯಾರಾಗಬೇಕೆಂಬ ವರದಿಯನ್ನು ವರಿಷ್ಠರಿಗೆ ಸಲ್ಲಿಸಲಿದ್ದಾರೆ.
