
ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ಹಾಸನ ಮೂಲದ ಸಿ.ಆರ್.ಪಿ.ಎಫ್. ಯೋಧ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ಹಾಸನದ ಕೆ.ಆರ್.ಪುರಂ ನಿವಾಸಿ ಪದ್ಮರಾಜು (52) ಮೃತ ಯೋಧ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಶುಕ್ರವಾರ ಮಣಿಪುರದಲ್ಲಿ ಮೃತಪಟ್ಟಿದ್ದಾರೆ.
ಕೆ.ಆರ್.ಪುರಂ ನಿವಾಸಕ್ಕೆ ಪದ್ಮರಾಜು ಅವರ ಪಾರ್ಥಿವ ಶರೀರವನ್ನು ತರಲಾಗಿದೆ ಇಂದು ಹಾಸನದಲ್ಲಿ ಪದ್ಮರಾಜು ಅವರ ಅಂತ್ಯಕ್ರಿಯೆ ನಡೆಯಲಿದೆ.
ಅವರಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ. ಪದ್ಮರಾಜು ಕುಟುಂಬದಲ್ಲಿ ನೀರವ ಮೌನ ಆವರಿಸಿದೆ
