
ಅರಸೀಕೆರೆ : ತಾಲೂಕು ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ “ಸಮಗ್ರ ಕೃಷಿ ಪ್ರಾಮುಖ್ಯತೆ” ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದರು.
ಈ ಕಾರ್ಯಕ್ರಮದಲ್ಲಿ ಸಮಗ್ರ ಕೃಷಿ ಪದ್ಧತಿ ಎಂದರೇನು? ಅದರ ಉದ್ದೇಶಗಳು ಹಾಗು ಅದರ ಘಟಕಗಳಾದ ಬೆಳೆ, ಜಾನುವಾರು, ಕೋಳಿ ಸಾಕಾಣಿಕೆ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮಿ ಕೃಷಿ , ಜೇನು ಸಾಕಾಣಿಕೆ, ಅಣಬೆ ಬೇಸಾಯ, ಅರಣ್ಯ ಕೃಷಿ ಹಾಗು ಜೈವಿಕ ಅನಿಲಗಳ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ.ಎಸ್. ಟಿ ಭೈರಪ್ಪನವರ್, ಬೇಸಾಯ ಶಾಸ್ತ್ರ ವಿಭಾಗ ಕೃಷಿ ಮಹಾವಿದ್ಯಾಲಯ ಕಾರೇಕೆರೆ ಹಾಸನ ಇವರು ಆಗಮಿಸಿ “ಸಮಗ್ರ ಕೃಷಿ ಪ್ರಾಮುಖ್ಯತೆ ” ಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದರ ಜೊತೆಗೆ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು.
