ಬೇಲೂರು ಸುದ್ದಿ : ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಬೇಲೂರು ಇವರ ಸಂಯುಕ್ತಾ ಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಿಗೆ “ವಿಧಾನ್ ಸೇ” ಸಮಾಧಾನ ಕಾನೂನು ಅರಿವು ಕಾರ್ಯಕ್ರಮ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಹೆಣ್ಣು ಬ್ರೂಣ ಹತ್ಯೆ ನಿಯಂತ್ರಣ ಕಾಯ್ದೆ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ನ್ಯಾಯಾದೀಶರಾದ ಶ್ರೀಯುತ ಪ್ರಸನ್ನ ಕುಮಾರ್ ಕಾರ್ಯಕ್ರಮದ ಉದ್ಘಾಟನೆ ಮಾಡಿ, ಹೆಣ್ಣು ಬ್ರೂಣ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಶ್ರೀಯುತ ಪುಟ್ಟಸ್ವಾಮಿಗೌಡರು, ವಕೀಲರಾದ ಶ್ರೀಯುತ ಚಂದ್ರುರವರು, ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀಯುತ ಹಾಲಪ್ಪರವರು ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ. ವಿಜಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು PCPNDT ಕಾಯ್ದೆ ಕುರಿತು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ದಯಾನಂದ ತಾಲೂಕ್ ಹಿರಿಯ ಆರೋಗ್ಯನಿರೀಕ್ಷಣಾಧಿಕಾರಿಗಳು, ಉಷಾ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮಂಗಳಮ್ಮ ತಾಲೂಕು ಹಿರಿಯ ಸುರಕ್ಷತಾ ಅಧಿಕಾರಿಗಳು , ಪ್ರಾಥಮಿಕ ಆರೋಗ್ಯ ಸುರಕ್ಷತೆ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *