
ಸಕಲೇಶಪುರ : ತಾಲೂಕಿನ ಹಾನುಬಾಳು ಗ್ರಾಮ ಪಂಚಾಯಿತಿಯ 2022-23 ನೇ ಸಾಲಿನ ಜಮಾಬಂಧಿ ಸಭೆಯನ್ನು ಮಾನ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾನುಬಾಳು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಸಲಾಯಿತು.
ಗ್ರಾಮ ಪಂಚಾಯಿತಿಯ 2022-23 ನೇ ಸಾಲಿನ ಜಮಾಬಂಧಿ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು ಮತ್ತು ವರದಿಯ ಮೇಲೆ ಚರ್ಚಿಸಲಾಯಿತು.
ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಸಹ ನಡೆಸಿ, ಸಾರ್ವಜನಿಕರ ಅವಹಾಲುಗಳನ್ನು ಸ್ವೀಕರಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಚ್ಚ ಗ್ರಾಮದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪ್ರತಿ ಮನೆಯಿಂದ ಕಸ ಸಂಗ್ರಹಣೆ ಶುಲ್ಕ ಸ್ವೀಕರಿಸಲು ಜಿಪಿಎಲ್ ಎಫ್ ಒಕ್ಕೂಟಕ್ಕೆ ಸೂಚನೆ ನೀಡಿದರು.
ಸಾರ್ವಜನಿಕರ ಸಮಸ್ಯೆ ಬಗ್ಗೆ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳು (ಅಭಿವೃದ್ದಿ) ಸೂಕ್ತ ಸೂಚನೆ ಮತ್ತು ಮಾರ್ಗದರ್ಶನ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಸಂತೋಶ್ ಕೆ ಆರ್ ರವರು ಪ್ರಸ್ಥಾವಿಕವಾಗಿ ಜಿಲ್ಲಾ ಪಂಚಾಯಿತಿಯಿಂದ ಅಭಿವೃದ್ದಿ ಸಹಕಾರ ಕೋರಿದರು. ಮತ್ತು ಮುಂದಿನ ದಿನಗಳಲ್ಲಿ ಉಂಟಾಗುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಲ್ಲಿ ಪ್ರಸ್ಥಾವನೆ ಸಲ್ಲಿಸಿದರು.
ಸಭೆಯಲ್ಲಿ ಸಕಲೇಶಪುರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು. ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಯೋಗರಾಜು ಹೆಚ್ ಎಂ, ಶ್ರೀಮತಿ ವಿಮಲ ರಾಜು, ಶ್ರೀಮತಿ ಶಿಲ್ಪ ಪುಟ್ಟರಾಜು, ಶ್ರೀಮತಿ ಹರಿಣಾಕ್ಷಿ ಮಂಜುನಾಥ ಹಾಜರಿದ್ದರು.
ಸಭೆಯಲ್ಲಿ ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು, ಎಲ್ಲಾ ಶಾಲೆಗಳ ಮುಖ್ಯೋಪಧ್ಯಾಯರು, ಆಶಾ ಅಂಗನವಾಡಿ ಶಿಕ್ಷಕಿರು, ಒಕ್ಕೂಟದ ಸದಸ್ಯರು, ಮತ್ತು ಸಾರ್ವಜನಿಕರು ಮತ್ತು ಕಚೇರಿ ಸಿಬ್ಬಂದಿ ಪಿಡಿಓ ಕಾರ್ಯದರ್ಶಿ ಭಾವಹಿಸಿದ್ದರು.
ಸಭೆಯ ನಂತರ ಗ್ರಾಮ ಪಂಚಾಯಿತಿ ಗ್ರಂಥಾಲಯ, ಸ್ವಚ್ಚ ಸಂಕೀರ್ಣ, ಕೆಪಿಎಸ್ ಶಾಲಾ ಆಟದ ಮೈದಾನ, ಕಾಪೌಂಡ್, ಶಾಲಾ ಕಟ್ಟಡ, ಸಂಜೀವಿನಿ ಷೆಡ್ ಎಲ್ಲಾ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದರು.
ಗ್ರಾಮ ಪಂಚಾಯಿತಿಯ ಅಭಿವೃದ್ದಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಕೆಪಿಎಸ್ ಶಾಲೆ ಹಾನುಬಾಳು ಭೇಟಿ ನೀಡಿ ಮಕ್ಕಳ ಶಿಕ್ಷಣದ ಬಗ್ಗೆ ಮತ್ತು ಶಾಲಾ ಕಟ್ಟಡದ ಮಾಹಿತಿಯನ್ನು ಶಾಲಾ ಆಡಳಿತ ಮಂಡಳಿ ಮತ್ತು ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಂದ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಇತರರು ಹಾಜರಿದ್ದರು.












