
ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ75ರ ಕಾಮಗಾರಿ ವಿಳಂಬವಾಗುತ್ತಿದ್ದು ಯಾವುದೇ ಸೂಚನಾ ಫಲಕ ಹಾಕದೆ ಇರುವ ಕಾರಣ ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಮಾಡುತ್ತಿರುವುದರಿಂದ ಪ್ರತಿ ದಿನವೂ ಕೂಡ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಅಪಘಾತವಾಗುತ್ತಿರುವುದರಿಂದ ಕಾಮಗಾರಿ ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕು ಎಂದು ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ರಘು ಪಾಳ್ಯ ಹೇಳಿದ್ದಾರೆ.





