ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರ ಜನ್ಮದಿನದ ಅಂಗವಾಗಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರದಂದು ಬೆಳಿಗ್ಗೆ ನಗರದ ದೇವಿಗೆರೆ ಬಳಿ ಇರುವ ಶ್ರೀ ನೀರುಬಾಗಿಲು ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇದೆ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ಮತ್ತು ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ೬೪ನೇ ಮತ್ತು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ೬೭ನೇ ಜನ್ಮ ದಿನವನ್ನು ನೀರು ಬಾಗಿಲು ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತ್ತು ದರ್ಗದಲ್ಲಿ ಪ್ರಾರ್ಥಿಸಲಾಗಿದೆ.

ಜಿಲ್ಲೆಯ ಅಭಿವೃದ್ಧಿ ಹರಿಹಾರ ಎನ್ನಿಸಿಕೊಂಡಿರುವ ಹೆಚ್.ಡಿ. ರೇವಣ್ಣನವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಎಲ್ಲಾ ಕ್ಷೇತ್ರಗಳಲ್ಲೂ ಕೂಡ ಅಬಿವೃದ್ಧಿ ಕೆಲಸ ಮಾಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರೈತಪರವಾದ ಆಡಳಿತ ನೀಡುವ ಮೂಲಕ ಸಾವಿರಾರು ಕೋಟಿ ರೂಗಳ ರೈತರ ಸಾಲಮನ್ನಾ ಮಾಡಿದ್ದಾರೆ.

ರೈತಪರ, ಕಾರ್ಮಿಕರ ಪರವಾದ, ಜನಪರವಾದ ಆಡಳಿತವನ್ನು ನೀಡಿ ಅವರು ತಮ್ಮದೆಯಾದಂತಹ ಹೆಸರನ್ನುಗಳಿಸಿದ್ದಾರೆ ಎಂದರು.

ಅವರಿಗೆ ಭಗವಂತನು ಒಳ್ಳೆಯದನ್ನು ಮಾಡಿ ಆರೋಗ್ಯ, ಆಯಸ್ಸು, ಅಧಿಕಾರ ನೀಡಲೆಂದು ಹಾಗೂ ಇನ್ನು ಉನ್ನತ ಅಧಿಕಾರಗಳು ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಸಿಹಿ ಹಂಚಲಾಗಿದೆ ಎಂದು ಹೇಳಿದರು.

ಇದೆ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ನಗರಸಭೆ ಸದಸ್ಯರಾದ ಗಿರೀಶ್ ಚನ್ನವೀರಪ್ಪ, ಜಿಲ್ಲಾ ಮಾಧ್ಯಮ ವಕ್ತಾರ ಹೊಂಗೆರೆ ರಘು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಟಿ. ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಶಂಕರ್, ಕಮಲ್ ಕುಮಾರ್,ಎಪಿಎಂಸಿ ಮಾಜಿ ಅಧ್ಯಕ್ಷ ಲಕ್ಷ್ಮಣ್, ಕಾರ್ಲೇ ಇಂದ್ರೇಶ್, ಸಮೀರ್ ಅಹಮದ್, ಗಿರೀಶ್, ಚಿಕ್ಕಹೊನ್ನೇನಹಳ್ಲಿ ಶಿವಣ್ಣ, ದಸ್ತಾಗಿರ್, ಚಂದ್ರಿಕಾ, ನಿರ್ಮಾಲ ಇತರರು ಪಾಲ್ಗೊಂಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *