*ಉಚಿತ ಆರೋಗ್ಯ ತಪಾಸಣಾ ಶಿಬಿರ*

ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ಕೃಷಿ ವಿದ್ಯಾರ್ಥಿಗಳು ಹಾಗೂ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾಯನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯವರ ನೇತೃತ್ವದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24 ರ ಅಂಗವಾಗಿ ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ *ಉಚಿತ ಆರೋಗ್ಯ ತಪಾಸಣಾ ಶಿಬಿರ* ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಉತ್ತಮ ಆರೋಗ್ಯಕ್ಕಿಂತ ಬೇರೆ ಸಂಪತ್ತಿಲ್ಲ ಎಂಬ ಮಾತಿನಂತೆ ,ಮನುಷ್ಯನಿಗೆ ತಾನು ಆರೋಗ್ಯವಾಗಿದ್ದರೆ ತನ್ನ ಕಾರ್ಯಚಟುವಟಿಕೆಗಳನ್ನು ಉತ್ಸಾಹದಿಂದ ಮಾಡಬಲ್ಲ ಹೀಗಾಗಿ ಆರೋಗ್ಯದ ಮಹತ್ವವನ್ನು ಕುರಿತು ಗ್ರಾಮದ ಜನರಿಗೆ ಮಾಹಿತಿ ನೀಡಲು ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ|| ಎಸ್. ಎನ್ . ವಾಸುದೇವನ್ ಡೀನ್(ಕೃಷಿ), ಕೃಷಿ ಮಹಾವಿದ್ಯಾಲಯ, ಹಾಸನ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಸಂಯೋಜಕರಾದ ಡಾ|| ಶಂಕರ ಎಂ. ಹೆಚ್., ಸಹ ಸಂಯೋಜಕರಾದ ಡಾ||ಅರವಿಂದ ಕುಮಾರ ಎಂ. ಕೆ. ಹಾಗೂ ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀ ಶಿವಬಸಪ್ಪ ಕಂದಕೂರ, ಡಾ|| ವಾಘ್ಮೋರೆ ವಿಜಯ ಕುಮಾರ್ ವೀರಪ್ಪರವರು ಹಾಗೂ ಕುಡುಕುಂದಿಯ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು,

ತಪಾಸಣೆಯನ್ನು ಮಾಡಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಉತ್ತಮ ಆರೋಗ್ಯದ ಮಹತ್ವ ಮತ್ತು ಕಾಪಾಡಿಕೊಳ್ಳುವ ವಿಧಾನಗಳ ಬಗ್ಗೆ ಮಾಹಿತಿ ನೀಡುವ ಭಿತ್ತಿಪತ್ರಗಳು ಎಲ್ಲರ ಗಮನ ಸೆಳೆದವು.

ಈ ಸಂದರ್ಭದಲ್ಲಿ ಮಾತನಾಡಿದ ಡಾ|| ಎಸ್.ಎನ್ ವಾಸುದೇವನ್ ಡೀನ್ (ಕೃಷಿ) ರವರು ಗ್ರಾಮದ ಜನತೆಗೆ ಆರೋಗ್ಯದ ಮಹತ್ವ ಹಾಗೂ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾಯನಗಳ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *