
*ತೆಂಗಿನಕಾಯಿಯಲ್ಲಿ ಮೌಲ್ಯವರ್ಧನೆ ಮತ್ತು ಅದರ ಮಾರುಕಟ್ಟೆ.*
ಚಗಚಗೆರೆ : ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಚಗಚಗೆರೆ ಗ್ರಾಮದಲ್ಲಿ ಕೃಷಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತೆಂಗಿನ ಕಾಯಿಯಲ್ಲಿ ಮೌಲ್ಯವರ್ಧನೆ ಮತ್ತು ಅದರ ಮಾರುಕಟ್ಟೆ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ನಿಟ್ಟಿನಲ್ಲಿ ರೈತರಿಗೆ ತೆಂಗಿನಕಾಯಿಯ ಮೌಲ್ಯವರ್ಧನೆ ಇಂದ ಆಗುವ ಲಾಭಗಳ ಬಗ್ಗೆ ಹಾಗೂ ಮಾರುಕಟ್ಟೆಯ ಬಗ್ಗೆ ಕೃಷಿ ಕಾಲೇಜಿನ ಆಹಾರ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದಂತಹ ಡಾ. ಭಾರತಿ. ಸಿ. ಮಿರಾಜಕರ ಅವರು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ತೆಂಗು ಬೆಳೆಗಾರರು ಹಾಗೂ ರೈತ ಮುಖಂಡರು ಹಾಗೂ ಗ್ರಾಮದ ಯುವಕರು ಭಾಗವಹಿಸಿ ಮಾಹಿತಿ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
