
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, ಕೃಷಿ ಮಹಾವಿದ್ಯಾಲಯ, ಕಾರೆಕೆರೆ, ಹಾಸನ, ಯುವ ರೆಡ್ ಕ್ರಾಸ್ ಘಟಕ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ (ರಿ), ಹಾಸನ ಘಟಕ, ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24 ಅಂಗವಾಗಿ ದೊಡ್ಡಯರಗನಾಳು ಗ್ರಾಮದಲ್ಲಿ ‘ ಉಚಿತ ಆರೋಗ್ಯ ತಪಾಸಣಾ ಶಿಬಿರ ‘ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಎಸ್ ಎನ್ ವಾಸುದೇವನ್ ಡೀನ್( ಕೃಷಿ ), ಕೃಷಿ ಮಹಾವಿದ್ಯಾಲಯ ಹಾಸನ ಇವರು ಆಗಮಿಸಿದ್ದರು.ಹಳ್ಳಿಗರಿಗೆ ಉಚಿತ ಆರೋಗ್ಯ ತಪಾಸಣೆ ಮಾಡುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ ರಕ್ತದ ಒತ್ತಡ, ಮಧುಮೇಹ ಪರೀಕ್ಷೆ, ಮಂಡಿ ನೋವು, ಸಾಮಾನ್ಯ ಜ್ವರ ಮುಂತಾದವುಗಳಿಗೆ ಉಚಿತ ಚಿಕಿತ್ಸೆ ನೀಡಲಾಯಿತು. ಒಟ್ಟು 107 ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು.
ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯಾಧಿಕಾರಿಗಳಾದ ಡಾ.ವೇಣು, ಸ್ವಸ್ಥ ವೃತ್ತ ವಿಭಾಗ, ಡಾ. ಸಂದೀಪ್, ಪಂಚಕರ್ಮ ವಿಭಾಗ, ಡಾ. ಆದರ್ಶ ಸಿ ಪಾಟೀಲ್, ಮಕ್ಕಳ ತಜ್ಞರು, ಡಾ. ಸ್ಪೂರ್ತಿ, ಕರ್ತವ್ಯ ನಿರತ ತಜ್ಞರು, ಚೈತ್ರಾ, ಓ ಟಿ ತಂತ್ರಜ್ಞರು, ಸುಪ್ರಿತಾ, ಲ್ಯಾಬ್ ತಂತ್ರಜ್ಞರು ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಶಂಕರ ಎಮ್ ಹೆಚ್, ಡಾ. ಶಿವಬಸಪ್ಪ ಕಂದಕೂರ, ಡಾ. ಸದಾಶಿವನಗೌಡ ಎಸ್ ಎನ್ ಓ , ಡಾ. ವಾಘಮಾರೆ ವಿಜಯಕುಮಾರ ವೀರಪ್ಪ ಹಾಗು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅನೇಕ ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.



