ಹಾಸನ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ದಯರಗನಾಳು ಗ್ರಾಮದಲ್ಲಿ ‘ಜೈವಿಕ ಇಂಧನ ಸಸಿಗಳ ಮಹತ್ವ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಆಧುನಿಕ ಯುಗದಲ್ಲಿ ಪೆಟ್ರೋಲಿಯಂ ಉತ್ಪನ್ನಗಳಿಗೆ ಉತ್ತಮ ಪರ್ಯಾಯವಾಗಿ ಜೈವಿಕ ಇಂಧನಗಳು ಬಳಕೆಯಾಗುತ್ತದೆಂದು ವಿಧ್ಯಾರ್ಥಿನಿಯಾದ ಲೇಖಪ್ರಿಯಾರವರು ತಿಳಿಸಿದರು ಹಾಗೂ ಇದು ಪರಿಸರಸ್ನೇಹಿಯಾಗಿದೆ ಎಂದು ತಿಳಿಸಿದರು.

ಜೈವಿಕ ಇಂಧನ ಸಸಿಗಳನ್ನು ಸುಲಭವಾಗಿ ಬೆಳೆಸಬಹುದು ಹಾಗೂ ಇದು ಒಂದು ಆದಾಯಾತ್ಮಕ ಮಾರ್ಗವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ಜೈವಿಕ ಇಂಧನ ಸಸಿಗಳಾದ ಹಿಪ್ಪೆ, ಹೊನ್ನೆ, ಸುರಹೊನ್ನೆ, ಸಿಮರುಬ, ಅಮೂರ, ಬೇವು ಮುಂತಾದವುಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಗ್ರಾಮದ ರೈತರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *