ಸಕಲೇಶಪುರ: ಬಿಜೆಪಿ ಎಸ್. ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸಕಲೇಶಪುರ ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಎಸ್. ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ನಂತರ ಪ್ರಪ್ರಥಮ ಬಾರಿಗೆ ಪಕ್ಷದ ಕಾರ್ಯಕರ್ತರ ಜೊತೆಗೆ ದತ್ತ ಮಾಲಾ ಧಾರಣೆ ಮಾಡಿ ದತ್ತ ಪೀಠಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ದತ್ತ ಪೀಠ ಹಿಂದೂಗಳ ಅಯೋಧ್ಯೆ ಎಂದೆ ಪ್ರಖ್ಯಾತವಾಗಿದೆ. ದತ್ತ ಪೀಠಕ್ಕೆ ಖಾಯಮ್ ಹಿಂದೂ ಅರ್ಚಕರ ನೇಮಕವಾಗಿದ್ದು ಮುಂದಿನ ದಿನಗಳಲ್ಲಿ ಪೀಠ ವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವುದು. ದತ್ತಾತ್ರೇಯನ ಕೃಪೆಯಿಂದ ದೇಶದಲ್ಲಿ ಹೆಚ್ಚಿನ ಶಾಂತಿ ಸಮೃದ್ಧಿ ನೆಲೆಸಲಿ ಎಂದರು.