ಅರಸೀಕೆರೆ : ತಾಲೂಕು ಗಂಡಸಿ ಹೋಬಳಿ ,ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ,ಬೆಂಗಳೂರು ಕೃಷಿ ಮಹಾವಿದ್ಯಾಲಯ, ಕಾರೆಕೆರೆ, ಹಾಸನದ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳು ಹಿರಿಯಾಳು ಗ್ರಾಮ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವೈಯಕ್ತಿಕ ನೈರ್ಮಲ್ಯ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂತು.
ಶಾಲೆಯ 18 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪ್ರಮುಖವಾಗಿ ವಿದ್ಯಾರ್ಥಿಗಳು ಪಾಲಿಸಬೇಕಾದ ವೈಯಕ್ತಿಕ ಸ್ವಚ್ಛತೆ,ಕೈ ತೊಳೆಯುವ 8 ವಿಧಾನಗಳು ಮತ್ತು ಅದರ ಪ್ರಾಮುಖ್ಯತೆಗಳ ಬಗ್ಗೆ ತಿಳಿಸಿಕೊಟ್ಟರು.
ಕೈ ತೊಳೆಯದೆ ಇರುವುದರಿಂದ ಹರಡುವ ರೋಗಗಳ ಬಗ್ಗೆ ಪ್ರಾತ್ಯಕ್ಷಿಣವಾಗಿ ಮಕ್ಕಳಿಗೆ ತೋರಿಸಿಕೊಟ್ಟರು. ಇದಲ್ಲದೆ ಆಹಾರ ವ್ಯರ್ಥ ಮಾಡುವುದರಿಂದ ಆಗುವ ನಷ್ಟ ಹಾಗೂ ಪರಿಣಾಮಗಳ ಬಗ್ಗೆ ಶಾಲೆಯ ಮಕ್ಕಳಿಗೆ ಅರಿವು ಮೂಡಿಸಿದರು.
ಈ ಕಾರ್ಯಕ್ರಮವನ್ನು ಕುರಿತು ಶಾಲಾ ಶಿಕ್ಷಕಿಯಾದ ಶ್ರೀಮತಿ ಭಾರತಿ ರವರು ಶಾಲೆಯ ಪರವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.