
ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಚಗಚಗೆರೆ ಗ್ರಾಮ ಪಂಚಾಯಿತಿಯ ಚಿಕ್ಕಯರಗನಾಳು ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯ ಹಾಸನದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಪ್ರಯುಕ್ತ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗಳ ಕುರಿತು ಕಾರ್ಯಕ್ರಮವನ್ನು ದಿನಾಂಕ 29/12/2023ರಂದು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾತನಾಡಿ ವಿವಿಧ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗಳಾದ ಪ್ರಧಾನ ಮಂತ್ರಿ ಲಘು ಆಹಾರ ಪ್ರಸಂಸ್ಕರಣ ಕೈಗಾರ ಸಂಸ್ಥೆಗಳ ವ್ಯವಸ್ಥೆ,ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ, ನ್ಯಾಷನಲ್ ಲೈವ್ ಸ್ಟಾಕ್ ಮಿಷಿನ್, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನ ಮುಂತಾದ ಯೋಜನೆಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು.
ಈ ಯೋಜನೆಗಳ ಪ್ರಮುಖ ಪ್ರಯೋಜನಗಳು ಹಾಗೂ ಉದ್ದೇಶಗಳನ್ನು ತಿಳಿಸುವುದರ ಜೊತೆಗೆ ಈ ಯೋಜನೆಗಳ ಫಲಾನುಭವಿಗಳಾಗಲು ಬೇಕಾದ ಅರ್ಹತೆಗಳನ್ನು ತಿಳಿಸಿದರು.
ಗ್ರಾಮಸ್ಥರಿಗೆ ಈ ಯೋಜನೆಗಳ ಬಗ್ಗೆ ಅರಿವಿಲ್ಲದ ಕಾರಣ, ಈ ಯೋಜನೆಗಳ ಬಗ್ಗೆ ತಿಳಿಸಿಕೊಟ್ಟಂತಹ ಎಲ್ಲಾ ವಿದ್ಯಾರ್ಥಿಗಳಿಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಊರಿನ ಪ್ರಮುಖ ಮುಖಂಡರು, ಹಿರಿಯರು,ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



