ಅರಸೀಕೆರೆ ತಾಲೂಕು ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಹಾಗು ಆಹಾರ ತಂತ್ರಜ್ಞಾನ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಕೃಷಿ ಯೋಜನೆಗಳ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಚಾಲ್ತಿಯಲ್ಲಿರುವ ಯೋಜನೆಗಳಾದ ಕೃಷಿ ಸಿಂಚಾಯಿ ಯೋಜನ, ಕೃಷಿ ಭಾಗ್ಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.

ಹಾಗು ರೈತ ಸಂಪರ್ಕ ಕೇಂದ್ರ ಗಂಡಸಿಯಲ್ಲಿ ಸದ್ಯಕ್ಕೆ ಇರುವ ಯೋಜನೆಗಳು ಹಾಗು ಬೇಕಾಗುವ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದರು. ಹಾಗೆಯೇ ಕೃಷಿ ಮಾರಾಟ ವಾಹಿನಿಯ ಬಗ್ಗೆ ಮಾಹಿತಿ ನೀಡಿ, ರೈತರಿಗೆ ಈ ವಾಹಿನಿಗೆ ನೊಂದಣಿ ಮಾಡಿಸಲು ತಿಳಿಸಿದವ ಇದರಿಂದ ಬೇರೆ ಬೇರೆ ಮಾರಕಟ್ಟೆಯಲ್ಲಿ ಬೇರೆ ಬೇರೆ ಬೆಳೆಗಳಿಗೆ ಇರುವ ಬೆಲೆಯನ್ನು ತಿಳಿಯಬಹುದು ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಅರವಿಂದ್ ಕುಮಾರ್ ಎಂ.ಕೆ ಸಹಾಯಕ ಪ್ರಾಧ್ಯಾಪಕರು, ಕೃಷಿ ಅರ್ಥ ಶಾಸ್ತ್ರ ವಿಭಾಗ . ಇವರು ಆಗಮಿಸಿ ಹೆಚ್ಚಿನ ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ಸುಮಾರು 50 ಜನ ರೈತರು ಆಗಮಿಸಿ ಮಾಹಿತ ಪಡೆದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *