ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಹಾಸನದ ಬಳಿ ಪಲ್ಟಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಕಾರು ಒಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದೆ.ಈ ವೇಳೆಯಲ್ಲಿ 14ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಇದ್ದರು ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾದ ಕಾರಣ, ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಚನ್ನರಾಯಪಟ್ಟಣ ಸಂಚಾರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *