
ಹಾಸನ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ದಯರಗನಾಳು ಗ್ರಾಮದಲ್ಲಿ ‘ಕೋಕೋಪೀಟ್ ಬಗ್ಗೆ ಅರಿವು’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ತೋಟಗಾರಿಕಾ ತಜ್ಞರಾದ ಶ್ರೀಮತಿ ರೇಖಾ ಬಿ ರವರು ಆಗಮಿಸಿದ್ದರು. ತೆಂಗು ಗ್ರಾಮದ ಪ್ರಮುಖ ಬೆಳೆಯಾಗಿದ್ದು ಕೋಕೋಪೀಟ್ ತಯಾರಿಕೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಹಾಗೂ ಲಾಭದಾಯಕವಾಗಿದೆ ಎಂದು ವಿದ್ಯಾರ್ಥಿಯಾದ ಹೇಮಂತ್ ರವರು ತಿಳಿಸಿದರು.
ಕೋಕೋ ಪೀಟ್ ತಯಾರಿಕಾ ವಿಧಾನದ ಬಗ್ಗೆ ಹಾಗೂ ಅದರ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಖಾ ಬಿ ರವರು ಕೋಕೋಪೀಟ್ ಸಸಿಗಳ ಆರಂಭಿಕ ಹಂತದಲ್ಲಿ ಬೆಳವಣಿಗೆಗೆ ಸೂಕ್ತವಾದ ವಾತಾವರಣವನ್ನು ಒದಗಿಸುತ್ತದೆಂದು ತಿಳಿಸಿದರು.
ಇದು ಒಂದು ನೈಸರ್ಗಿಕ ಪದಾರ್ಥವಾಗಿದ್ದು, ಹೆಚ್ಚಿನ ರಫ್ತು ಮೌಲ್ಯವನ್ನು ಹೊಂದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಗ್ರಾಮದ ರೈತರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
