
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಉದ್ಘಾಟನೆಯ ಸುವರ್ಣ ಕ್ಷಣಗಳು ಹತ್ತಿರವಾಗುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿದೆ. ಹೀಗಾಗಿ ಆ ಶುಭ ಗಳಿಗೆಗೆ ಕೋಟ್ಯಾಂತರ ರಾಮನ ಭಕ್ತರು ಬೆರಗು ಕಣ್ಣುಗಳಿಂದ ಕಾಯುತ್ತಿದ್ದಾರೆ.
ಇದೀಗ ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಮಹೋತ್ಸವದ ಸಂದರ್ಭದಲ್ಲಿ ವಿಶ್ವವಿಖ್ಯಾತ ತಿರುಪತಿ ಲಡ್ಡುಗಳನ್ನು ವಿತರಣೆ ಮಾಡಲು ಟ್ರಸ್ಟ್ ನಿರ್ಧರಿಸಿದೆ. ಹೌದು, ತಿರುಪತಿಯಿಂದ ಅಯೋಧ್ಯೆಗೆ ಲಡ್ಡು ಪೂರೈಕೆಯಾಗಲಿದೆ ಎಂದು ತಿರುಪತಿ ತಿರುಮಲ ದೇವಸ್ಥಾನಂ ಅಧಿಕೃತವಾಗಿ ಮಾಹಿತಿ ನೀಡಿದೆ. ತಿರುಪತಿ ದೇಗುಲದ ವತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ ಮಾಡಲಾಗುವುದು. ಪ್ರತಿ ಲಡ್ಡುವಿನ ತೂಕ 25 ಗ್ರಾಂ ಇರುತ್ತದೆ ಎಂದು ಟಿಟಿಡಿಯ ಅಧಿಕಾರಿಗಳು ತಿಳಿಸಿದ್ದಾರೆ.

