ಹಾಸನ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ದಯರಗನಾಳು ಗ್ರಾಮದಲ್ಲಿ ‘ಮೆಕ್ಕೆಜೋಳದಲ್ಲಿ ಸಮಗ್ರ ಕೀಟ ನಿರ್ವಹಣೆ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮೆಕ್ಕೆಜೋಳದಲ್ಲಿ ಕಂಡುಬರುವ ಕೀಟಗಳ ಬಗ್ಗೆ ವಿದ್ಯಾರ್ಥಿಯಾದ ಸೋಯಲ್ ರವರು ತಿಳಿಸಿದರು. ಕೀಟಗಳ ಬಾಧೆಯಿಂದಾಗುವ ಹಾನಿಗಳ ಬಗ್ಗೆ ಹಾಗು ಬೆಳೆ ನಷ್ಟದ ಬಗ್ಗೆ ಮಾಹಿತಿ ನೀಡಿದರು.

ಸಮಗ್ರ ಕೀಟ ನಿರ್ವಹಣೆ ಕ್ರಮಗಳಾದ ಸಾಗುವಳಿ ಕ್ರಮ, ಯಾಂತ್ರಿಕ ಕ್ರಮ, ಜೈವಿಕ ಕ್ರಮ ಹಾಗೂ ರಾಸಾಯನಿಕ ಕ್ರಮಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಗ್ರಾಮದ ರೈತರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *