ಗದಗ : ನಟ ಯಶ್​ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುತ್ತಿದ್ದಾಗ ಮೂವರು ಯುವಕರಿಗೆ ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಯುವಕರು ಎಂದು ಗುರುತಿಸಲಾಗಿದೆ.

ಯಶ್​ ಬರ್ತ್​ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಬ್ಯಾನರ್ ಕಟ್ಟಲು ಮುಂದಾಗಿದ್ದದ್ದಾರೆ. ಬ್ಯಾನರ್ ಮೇಲೆ ಎತ್ತುತ್ತಿದ್ದಾಗ ಮೇಲೆ ಹಾದು ಹೋಗಿದ್ದ ಯುವಕರಿಗೆ ವಿದ್ಯುತ್ ಶಾಕ್ ತಗುಲಿದೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ ಮಂಜುನಾಥ್ , ದೀಪಕ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *