ದೊಡ್ಡಯರಗನಾಳು ಗ್ರಾಮದಲ್ಲಿ ‘ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ಅರಿವು’ ಕಾರ್ಯಕ್ರಮ.

ಹಾಸನ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ದಯರಗನಾಳು ಗ್ರಾಮದಲ್ಲಿ ‘ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ಅರಿವು’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಪವನ್ ಕುಮಾರ್ , ಸಹಾಯಕ ನಿರ್ದೇಶಕರು ,ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಪಶು ಆಸ್ಪತ್ರೆ ಆವರಣ, ಸಂತೇಪೇಟೆ, ಹಾಸನ ಇವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯ ಸಂಪೂರ್ಣ ಮಾಹಿತಿಯನ್ನು ಒದಗಿಸಿದರು ಹಾಗೂ ಅದರಿಂದಾಗುವ ಲಾಭದ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.

ಇದು ಸಮಗ್ರ ಕೃಷಿ ಪದ್ಧತಿಯ ಒಂದು ಭಾಗವಾಗಿದ್ದು ಆದಾಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಗ್ರಾಮದ ರೈತರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *