ಹಾಸನ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ವಿದ್ಯಾರ್ಥಿನಿಯರು ಅಂತಿಮ ವರ್ಷದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಡಿಯಲ್ಲಿ ಒಂದು ವಾರದ ತರಬೇತಿ ಶಿಬಿರವನ್ನು ವಿವಿಧ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆಸುತ್ತಿದ್ದಾರೆ

ಕೃಷಿ ವಿಜ್ಞಾನ ಕೇಂದ್ರ ಮೂಡಿಗೆರೆಯಲ್ಲಿ 22 ವಿದ್ಯಾರ್ಥಿನಿಯರು ತರಬೇತಿಯನ್ನು ಪಡೆಯುತ್ತಿದ್ದಾರೆ.

ವಿದ್ಯಾರ್ಥಿನಿಯರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೇಂದ್ರದ ಧ್ಯೇಯೋದ್ದೇಶಗಳು ಅಲ್ಲಿನ ಚಟುವಟಿಕೆಗಳನ್ನು ಕುರಿತು ವಿವರವಾಗಿ ತಿಳಿಸಿಕೊಟ್ಟರು .

ಕೃಷಿ ವಿಜ್ಞಾನ ಕೇಂದ್ರ ಮೂಡಿಗೆರೆಯಲ್ಲಿ ವಿದ್ಯಾರ್ಥಿನಿಯರಿಗೆ ಅಣಬೆ ಬೇಸಾಯದ ಮಹತ್ವ, ಜೀವಾಮೃತ ತಯಾರಿಸುವ ವಿಧಾನ, ಮುಂಚೂಣಿ ಕ್ಷೇತ್ರ ಪ್ರಾತ್ಯಕ್ಷಿಕೆ (ಅಡಿಕೆ ಮತ್ತು ಕಾಳು ಮೆಣಸು), ವಿವಿಧ ಬೆಳೆಗಳಲ್ಲಿ ಕೀಟ ಮತ್ತು ರೋಗ ನಿರ್ವಹಣೆ, ಒಳನಾಡು ಮೀನು ಗಾರಿಕೆ ಘಟಕಕ್ಕೆ ಭೇಟಿ ಹಾಗೂ ಅವುಗಳ ಪಾಲನೆಯ ಬಗ್ಗೆ ಮಾಹಿತಿ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಂಶೋಧನಾ ಕ್ಷೇತ್ರದಲ್ಲಿ ಇರುವ ರಬ್ಬರ್, ಕೋಕೋ ಮುಂತಾದ ಇತರೆ ತೋಟಗಾರಿಕೆ ಕ್ಷೇತ್ರಗಳಿಗೆ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿಗಳ ನೇತೃತ್ವದಲ್ಲಿ ಭೇಟಿ ನೀಡಿ ಅವುಗಳ ಬಗ್ಗೆ ಮಾಹಿತಿಯನ್ನು ಪಡೆದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *