
ಮುಂಬರುವ ವಿಧಾನ ಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಾಗೂ ಜೆಡಿಎಸ್ – ಬಿಜೆಪಿ ಮೈತ್ರಿ ಸಂಬಂಧ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರ ಜತೆ ಸಭೆ ನಡೆಸಿದರು.
ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು, ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹಾಗೂ ಜಾತ್ಯತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ ರವರು, ವಿಧಾನ ಪರಿಷತ್ ಸದಸ್ಯರಾದ ಭೋಜೆಗೌಡರು, ಕೆ.ಎ. ತಿಪ್ಪೇಸ್ವಾಮಿ ನಿಖಿಲ್ ಕುಮಾರಸ್ವಾಮಿ ಅವರುಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.



