
ಇಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರು, ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜು ರವರು ಭಾಗವಹಿಸಿದರು.
ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಬಸವರಾಜ ಎಸ್. ಬೊಮ್ಮಾಯಿ, ಡಿ. ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಮಾಜಿ ಉಪಮುಖ್ಯಮಂತ್ರಿಗಳಾದ ಕೆ. ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಮಾಜಿ ಸಚಿವರಾದ ಸಿ. ಟಿ. ರವಿ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ಮಾಜಿ ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
