ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ದೂರು ಬಂದ ಹಿನ್ನಲೆಯಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಲಿ ನಡೆಸಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ.

ಮೊದಲು ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ವಾಸವಾಗಿರುವ ರಿಂಗ್ ರಸ್ತೆ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆತ ಕೆಲಸ ನಿರ್ವಹಿಸುವ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ್ದು, ನಂತರ ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸದ ಹಾಗೂ ಕಚೇರಿ ಮೇಲೂ ದಾಳಿ ನಡೆಸಿ ಕೆಲ ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ಆಸ್ತಿ ಪರಿಶೀಲಿಸಿದ್ದಾರೆ.

ಬುಧವಾರದಂದು ಬೆಳಗಿನ ಜಾವದ ವೇಳೆ ಒಂದೆ ಬಾರಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅನೇಕ ಗಂಟೆಗಳ ಕಾಲ ದಾಖಲೆ ಪರಿಶೀಲಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *