ಸಕಲೇಶಪುರ : ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಣಾಧಿಕಾರಿ ಅವರ ನೇತೃತ್ವದಲ್ಲಿ ಮಾಸಿಕ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಬಿರಡಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಅರುಣೋದಯ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಮಾಸಿಕ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಉದ್ದೇಶ ಸ್ವ ಸಹಾಯ ಗುಂಪು ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಸದಸ್ಯರುಗಳು ಉತ್ಪಾದಿಸುವ ಕೃಷಿ ಉತ್ಪನ್ನಗಳು ಕೃಷಿಯೇತರ ಉತ್ಪನ್ನಗಳು ಹಾಗೂ ಆಹಾರ ಪದಾರ್ಥಗಳಿಗೆ ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಬಿರಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತೀಶ್, ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ , ಸಹಾಯಕ ನಿರ್ದೇಶಕರಾದ ಆದಿತ್ಯ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ನಾಗೇಶ್ , ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಿರೀಶ್ ಕುಮಾರ್ , ಕಾರ್ಯದರ್ಶಿ ರಾಜಶೇಖರ್ , ವಲಯ ಮೇಲ್ವಿಚಾರಕರಾದ ರೇಣುಕ ಪ್ರಸಾದ್, ಮತ್ತು ರತನ್ , ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾದ ತೀರ್ಥ, ಪಂಚಾಯತಿ ಉಪಾಧ್ಯಕ್ಷೆ ಮಧುಮಣಿ , ಎಂ ಬಿ ಕೆ, ಎಲ್ ಸಿ ಆರ್ ಪಿ ಕೃಷಿ ಸಖಿ ಮತ್ತು ಪಶು ಸಖಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಪ್ರತಿನಿಧಿಗಳು ಸ್ವಸಹಾಯ ಗುಂಪಿನ ಸದಸ್ಯರುಗಳು ಮತ್ತು ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *