ಹಾಸನ: ತಂದೆ-ಮಗನ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಪೂಮಗಾಮೆ ಗ್ರಾಮದಲ್ಲಿ ನಡೆದಿದೆ.

ಪೂಮಗಾಮೆ ಗ್ರಾಮದ ನಿವಾಸಿ ರವಿ (45) ಮೃತಪಟ್ಟವರು. ತಂದೆಯನ್ನು ಹತ್ಯೆಗೈದ ಆರೋಪಿ ಸುದೀಪ್ (24) ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಬುಧವಾರ ರಾತ್ರಿ ತಂದೆ ಮತ್ತು ಮಗ ಇಬ್ಬರೂ ಮದ್ಯ ಸೇವಿಸಿ ಮನೆಗೆ ಬಂದಿದ್ದರು ಎನ್ನಲಾಗಿದೆ.

ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿ, ಈ ವೇಳೆ ಪುತ್ರ ಸುದೀಪ್‌ ತನ್ನ ತಂದೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಪರಿಣಾಮ ಗಂಭೀರ ಗಾಯಗೊಂಡ ರವಿ ಅವರು ಅಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ತಂದೆಯನ್ನು ಹತ್ಯೆಗೈದ ನಂತರ ಆರೋಪಿ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *