
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡಿರುವ ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ವತಿಯಿಂದ ದೂರು ನೀಡಲಾಯಿತು.
ಶಾಸಕರಾದ ಬಾಲಕೃಷ್ಣ ಅವರ ಶಾಸಕತ್ವವನ್ನು ರದ್ದು ಮಾಡಬೇಕು ಹಾಗೂ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದುಪಡಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ಅವರಿಗೆ ಮನವಿ ಸಲ್ಲಿಸಲಾಯಿತು.
ಜೆಡಿಎಸ್ ಪಕ್ಷದ ಶಾಸಕರಾದ ಸುರೇಶ್ ಬಾಬುರವರು, ಕರೆಮ್ಮ ನಾಯಕ್ ಅವರು, ಹೆಚ್.ಟಿ.ಮಂಜುನಾಥ್ ಅವರು, ಹರೀಶ್ ಗೌಡರು, ಸ್ವರೂಪ್ ಪ್ರಕಾಶ್ ಅವರು ಹಾಗೂ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರವರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿರವರು, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಸೇರಿ ಅನೇಕ ನಾಯಕರು ಉಪಸ್ಥಿತರಿದ್ದರು.

