
ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಸುಮಾರು ಆರೇಳು ವರ್ಷ ಪ್ರಾಯದ ಗಂಡು ಸಾರಂಗ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ ೭ ಗಂಟೆ ಸಮಯದಲ್ಲಿ ಹಿಟ್ ಅಂಡ್ ರನ್‌ನಿಂದ ನಡೆದಿರಬಹುದು ಎನ್ನಲಾದ ಘಟನೆಯನ್ನು ತಿಳಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾರಂಗವನ್ನು ಬದುಕಿಸಲು ಸಾಕಷ್ಟು ಪ್ರಯತ್ನ ನಡೆಸಿದರು.
ಆದರೆ ಸಾರಂಗದ ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮೃತಪಟ್ಟಿತು.
ಸಂಕೇನಹಳ್ಳಿಯ ಹಿರಿಯ ಪಶುವೈದ್ಯಾಧಿಕಾರಿ ಡಾ.ಜಗದೀಶ್ ಎ.ಎಲ್ ಸಾರಂಗದ ಮರಣೋತ್ತರ ಪರೀಕ್ಷೆ ನಡೆಸಿದರು.
