ಆಲೂರು : ಸಂವಿಧಾನ ಜಾಗೃತಿ ಜಾಥಾ ತಾಲೂಕಿನ ಮಡಬಲು ಗ್ರಾಮ ಪಂಚಾಯಿತಿಯಲ್ಲಿ ಸ್ವಾಗತಿಸಲಾಯಿತು

ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಅತ್ಯಂತ ವಿಜೃಂಬಣೆಯಿಂದ “ಸಂವಿಧಾನ ಜಾಗೃತಿ ಜಾಥಾ”ದಲ್ಲಿ ಭಾಗವಹಿಸಿ ವಿಶೇಷವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಜೇಶ್ವರಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

ಶಿಕ್ಷಣ ಇಲಾಖೆ ಸುರೇಶ್ ಮಾತನಾಡಿ ಎಲ್ಲರಿಗೂ ಸಂವಿಧಾನದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯನ್ಯಾಯ,ದೊರಗಿಸುವ ನಿಟ್ಟಿನಲ್ಲಿ ಸಂವಿಧಾನ ರಚನೆಯಾಗಿದೆ ಇದನ್ನ ತಿಳಿದು ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ನಂತರ ತಾಲೂಕು ಡಿಎಸ್ಎಸ್ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ ಭಾರತವನ್ನು ಸಾರ್ವಭೌಮ ಸಮಾಜವಾದಿ ಸಮಭಾವದ ಪ್ರಜಾಸತಾತ್ಮಕವಾಗಿ ರಚಿಸಲಾಗಿದೆ ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಶ್ರದ್ದಾಪೂರ್ವಕವಾಗಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಿಂಗರಾಜು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು,ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ದಲಿತ, ಗ್ರಾಮಸ್ಥರು ಶಾಲಾ ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು,ಶಾಲಾ ಮಕ್ಕಳು, ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *