ಸಕಲೇಶಪುರ : ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂವಿಧಾನ ಜಾತ ರಥ ಯಾತ್ರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು

ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿಲ್ಪಾ ಜಗದೀಶ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ಆನಂದ್ ಮೂರ್ತಿ ಹಾಗೂ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಾಮಕೃಷ್ಣ, ಕೃಷಿ ಆಡಳಿತ ಅಧಿಕಾರಿಗಳಾದ ಪ್ರಕಾಶ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಹರೀಶ್, ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.

ಸಂವಿಧಾನ ಪ್ರಸ್ತಾವನೆಯನ್ನು ವಿಸ್ತಾರವಾಗಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಉಪನ್ಯಾಸಕರಾದ ಯತೀಶ್ ರವರಿಂದ ಮನವರಿಕೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾಮದ ಮುಖಂಡರು, ಶಾಲೆ ಮಕ್ಕಳು ಗ್ರಾಮ ಪಂಚಾಯತಿಯ, ಸದಸ್ಯರುಗಳಾದ ವಿರೂಪಾಕ್ಷ, ಸಂಗಪ್ಪ, ರವಿಕುಮಾರ್, ಇಬ್ರಾಹಿಂ, ಪ್ರಕಾಶ್, ಇತರೆ ಸದಸ್ಯರುಗಳು, ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರಘು, ಕಾರ್ಯದರ್ಶಿಗಳಾದ ರಮೇಶ್, ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂದಿ ವರ್ಗದವರು, ಆಧಾರವಳ್ಳಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ರವಿ m g ಶಿಕ್ಷಕರಾದ ವೆಂಕಟೇಶ್ ಸಿಬ್ಬಂದಿ ವರ್ಗದವರು. ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *